Search

Krishnam Pranaya Sakhi: “ಕೃಷ್ಣಂ ಪ್ರಣಯ ಸಖಿ” ಚಿತ್ರದ ಮೊದಲ ಹಾಡು ಮೇ 25 ರಂದು ರಿಲೀಸ್

ಬೆಂಗಳೂರು: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಗಳು ಎಲ್ಲರ ಮೆಚ್ಚುಗೆ ಗಳಿಸಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌.

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

More News

You cannot copy content of this page