ಬೆಂಗಳೂರು :ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ರಮಕ್ಕೆ ಹೈಕೊರ್ಟ್ ತೀವ್ರ ತರಾಟೆ ತೆಗೆದು ಕೊಂಡಿದೆ.
ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂಧಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಧೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ಕ್ರಮಕ್ಕೆ ತೀವ್ರ ಅಸಮಾದಾನ ವ್ಯಕ್ತಪಡಿಸಿತು.
ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಕಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು.
ಪ್ರಸ್ತುತ ದಿನಗಳಲ್ಲಿ ಪೊಲೀಸ್‌ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೆವೆ ಸಲ್ಲಿಸುವುದಾದರೂ ಹೇಗೆ ಎಂದು ಪೀಠ ಇದೇ ವೆಳೆ ಪ್ರಶ್ನೆ ಮಾಡಿತು.
ಜನ ಪ್ರತಿನಿಧಯಾದ ವ್ಯಕ್ತಿ ಯಾವುದೋ ವ್ಯಕ್ತಿಯನ್ನು ಬಂಧಿಸಿದಲ್ಲಿ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅವರನ್ನು ಪೊಲೀಸರು ಬಂದಿಸಿದ್ದಾರೆ ಎಂದರೆ ತಕ್ಷಣ ಜನ ಪ್ರತಿನಿಧಿ ಪೊಲೀಸ್ ಠಾಣೆಗೆ ಹೋಗಲು ಸಾಧ್ಯವೇ, ಅರ್ಜಿದಾರರು ನೀವು ಠಾಣೆಗೆ ಹೋಗಬಾರದಾಗಿತ್ತು ಎಂದು ತಿಳಿಸಿತು,
ಯಾವುದೇ ವ್ಯಕ್ತಿಯನ್ನು ಬಂಧಿಸಿದಲ್ಲಿ ಅದನ್ನು ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಬದಲಾಗಿ ಶಾಸಕರಾದವರು ಠಾಣೆಗೆ ಹೋದರೆ ಪೊಲೀಸರು ತಮ್ಮ ಸೇವೆ ಸಲ್ಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿತು.
ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದ, ವಿದೇಶ ನ್ಯಾಯಾಲಯಗಳು ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅಧರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ಪೀಠ ತಿಳಿಸಿತು.
ವಾದ ಆಲಿಸಿದ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೆ, ಮುಂದಿನ ವಿಚಾರಣೆಯವರೆ ಸಾವಧಾನದಿಂದ ಇರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.