ಬೆಂಗಳೂರು: ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ಥೆಯ ಅಪಹರಣ ಪ್ರಕರಣದಲ್ಲಿ ತಮ್ಮ ವಿರುದ್ಧದ ದಾಖಲಾಗಿದ್ದ ಎಫ್ ಐ ಆರ್ ರದ್ದುಕೋರಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು ಅರ್ಜಿ ವಿಚಾರಣೆಗೆ ನಿಗದಿ ಪಡಿಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿದೆ
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರ ಸಿ.ವಿ.ನಾಗೇಶ್ ಪ್ರಕರಣದಲ್ಲಿ ಅರ್ಜಿದಾರ ರೇವಣ್ಣ ಅವರ ಪಾತ್ರ ಇಲ್ಲ. ಅಪಹರಣ ಮಾಡಬೇಕಾದಲ್ಲಿ ಬೆದರಿಕೆ ಹಾಕಬೇಕಾಗುತ್ತದೆ. ಈ ಪ್ರಕರಣದಲ್ಲಿ ಆ ರೀತಿಯ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಎಫ್‌ಐಆರ್ ದಾಖಲಿಸಿರುವುದೇ ಕಾನೂನು ಬಾಹಿರವಾದದ್ದಾಗಿದೆ. ಆದ್ದರಿಂದ ಎಫ್‌ಐಆರ್ ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ಅಲ್ಲದೆ, ಸತೀಶ್ ಬಾಬಣ್ಣ ಎಂಬುವರು ಹತ್ತಾರು ವರ್ಷಗಳಿಂದ ರೇವಣ್ಣ ಮನೆಯಲ್ಲಿ ಕೆಲಸ ಮಾಡುಕೊಂಡಿದ್ದವರು, ರೇವಣ್ಣ ಯಾವುದೇ ಸೂಚನೆ ನೀಡಿಲ್ಲ. ಜತೆಗೆ, ಸಂತ್ರಸ್ತೆಯನ್ನು ಅರ್ಜಿದಾರರ ವಶದಲ್ಲಿಯೂ ಇಟ್ಟುಕೊಂಡಿಲ್ಲ. ಎಲ್ಲವೂ ಸುಳ್ಳು ಆರೋಪವಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ದೂರಿನದಲ್ಲಿಯೂ ತಿಳಿಸಿರುವಂತೆ ರೇವಣ್ಣ ಹೇಳಿದ್ದಾರೆ ಎಂದು ತಿಳಿಸಿ ಸತೀಶ್ ಬಾಬಣ್ಣ ದೂರುದಾರನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ ಎಂಬುದಾದಗಿದೆ. ಆದರೆ, ಅರ್ಜಿದಾರರಾದ ಎಚ್.ಡಿ.ರೇವಣ್ಣ ನೇರವಾಗಿ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿಲ್ಲ. ಸತೀಶ್ ಬಾಬಣ್ಣ ಹೇಳಿದ್ದಾರೆ ಎಂಬುದಾಗಿದೆ. ಆದರೆ, ರೇವಣ್ಣ ಹೇಳಿರುವುದಕ್ಕೆ ಸಾಕ್ಷ್ಯಾಧಾರಗಳಿಲ್ಲ. ಆದ್ದರಿಂದ ಅರ್ಜಿದಾರರ ವಿರದ್ಧದ ಪ್ರಕರಣ ದಾಖಲಿಸಿರುವುದು ಕಾನೂನು ಬಾಹಿರ ಎಂದು ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದರು.
ಜತೆಗೆ, ಪ್ರಕರಣದಲ್ಲಿ ಅಪ್ಪ, ಅಮ್ಮ ಮತ್ತು ಮಗನನ್ನು ವಶದಲ್ಲಿಟ್ಟುಕೊಳ್ಳಲು ಎಸ್‌ಐಟಿ ಬಯಸಿದೆ. ಆರೋಪಿ ಪ್ರಜ್ವಲ್ ತಾನೇ ಹಾಜರಾಗುತ್ತೇನೆ ಎಂದು ತಿಳಿಸಿದ್ದರೂ, ವಿಮಾನ ನಿಲ್ದಾಣದಲ್ಲಿ ಪೊಲೀಸರನ್ನು ಜಮಾಯಿಸಿ ನಾಟಕವನ್ನು ಪ್ರದರ್ಶನ ಮಾಡಿಸಲಾಗುತ್ತಿದೆ ಎಂದು ನಾಗೇಶ್ ಪೀಠಕ್ಕೆ ವಿವರಿಸಿದರು.
ಅಂತಿಮವಾಗಿ ವಾದ ಆಲಿಸಿದ ಪೀಠ, ಎಸ್‌ಐಟಿಗೆ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ