Search

VALMIKI CORPORATION SCAM: ಬ್ಯಾಂಕ್ ದೂರು ಸಿಬಿಐ ಎಫ್ ಐಆರ್ ದಾಖಲು : ಸಚಿವ ನಾಗೇಂದ್ರಗೆ ಸಂಕಷ್ಟ

ಬೆಂಗಳೂರು : ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.

ಯೂನಿಯನ್ ಬ್ಯಾಂಕ್‌, ಬೆಂಗಳೂರಿನ ಎಂ.ಜಿ.ರಸ್ತೆ ಶಾಖೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಮಹೇಶ್.ಜೆ ಎಂಬುವವರು ನೀಡಿರುವ ದೂರಿನನ್ವಯ ಶಾಖೆಯ ಹಿಂದಿನ ಮುಖ್ಯಸ್ಥರಾದ ಸುಚಿಸ್ಮಿತಾ ರೌಲ್,ದೀಪಾ.ಡಿ,ಹಿಂದಿನ ಕ್ರೆಡಿಟ್ ಆಫೀಸರ್ ಕೆ.ವಿ.ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳು ಸೇರಿದಂತೆ ಐವರ ವಿರುದ್ಧ ಸಿಬಿಐ ಏಫ್ಐಆರ್ ದಾಖಲಿಸಿಕೊಂಡಿದೆ.

ಆರೋಪಿತರು
ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದ ಖಾತೆಗಳಿಂದ ಅಕ್ರಮ ಹಣ ವರ್ಗಾವಣೆ, ಮೊತ್ತವನ್ನು ಹಿಂತೆಗೆದು ಕೊಂಡಿರುವುದರ ಮೂಲಕ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದದಲ್ಲಿ ಅನುದಾನದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದ ಅದರ ಅಧೀಕ್ಷಕ ಚಂದ್ರಶೇಖರನ್‌ ಡೆತ್‌ನೋಟ್‌ ಬರೆದಿಟ್ಟು ಮೇ 26ರಂದು ಆತ್ಮಹತ್ಯೆಗೆ ಶರಣಾಗಿದ್ದರು.

ಚಂದ್ರಶೇಖರನ್ ಅವರ ಪತ್ನಿಯ ದೂರಿನನ್ವಯ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅಲ್ಲದೆ ನಿಗಮದಲ್ಲಿ ಅನುದಾನ ಹಣವು ಬ್ಯಾಂಕ್ ಮೂಲಕ ದುರ್ಬಳಕೆಯಾಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಹ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಮಗ್ರ ತನಿಖೆ‌‌ಗಾಗಿ ಕಳೆದ ಶುಕ್ರವಾರವಷ್ಟೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶ ಹೊರಡಿಸಿತ್ತು. ಮತ್ತೊಂದೆಡೆ ಅಕ್ರಮದ ಕುರಿತು ತನಿಖೆ ನಡೆಸುವಂತೆ ಯೂನಿಯನ್ ಬ್ಯಾಂಕ್‌ನ ಎಂ.ಜಿ.ರಸ್ತೆ ಶಾಖೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಸಿಬಿಐಗೆ ದೂರು ನೀಡಿದ್ದರು.

More News

You cannot copy content of this page