ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್-5 ರ ಸ್ಪರ್ಧಿಗಳಾದ ರ್ಯಾಪರ್ ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡಬ್ಬರ ದಾಂಪತ್ಯ ಜೀವನ ಮುರಿದು ಬಿದ್ದಿದ್ದು ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಗು ಮಾಡಿಕೊಳ್ಳುವ ವಿಚಾರಕ್ಕೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿದ್ದು ಇದೀಗ ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್-5 ನಲ್ಲಿ ಪರಿಚಯವಾದ ಚಂದನ್ ಶೇಟ್ಟಿ ಮತ್ತು ನಿವೇದಿತಾಗೆ ಇಬ್ಬರ ನಡುವೆ ಪ್ರೇಮಾಂಕುರವಾಗಿ, ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಇದೀಗ ಇಬ್ಬರ ನಾಲ್ಕು ವರ್ಷಗಳ ದಾಂಪತ್ಯ ಅಂತ್ಯವಾಗಿದೆ. 2020 ರ ಫೆಬ್ರವರಿ 26 ರಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಇಬ್ಬರ ಕುಟುಂಬ ಒಪ್ಪಿ ಅದ್ದೂರಿಯಾಗಿ ಮದುವೆ ನೆರವೇರಿಸಿಕೊಟ್ಟಿದ್ದರು.