Search

Anchor Aparna Death: ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣ ಇನ್ನಿಲ್ಲ

ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (51) (Anchor Aparna) ಅವರು ನಿಧನರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಜುಲೈ 11) ರಾತ್ರಿ ನಿಧನರಾಗಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು.

90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.

2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ` ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ

More News

You cannot copy content of this page