BVB College Student Death: ಬಿವಿಬಿ ಕಾಲೇಜು ವಿದ್ಯಾರ್ಥಿ ಸಾವು: ವಸತಿ ನಿಲಯದ ಒಳಗಡೆ ಆತ್ಮ ಹತ್ಯೆ ಶಂಕೆ!!

ಹುಬ್ಬಳ್ಳಿ: ಹುಬ್ಬಳ್ಳಿಯ ಶಿರಡಿ ನಗರದ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ರಾಕೇಶ್ ಶ್ರೀಶೈಲ್ ಜಂಬಲದಿನ್ನಿ(21) ಮೃತ ವಿದ್ಯಾರ್ಥಿ. ಈತ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ. ರಾಕೇಶ್ ಶ್ರೀಶೈಲ್ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಕೇಶ್ ನಿತ್ಯ ಆನ್​ಲೈನ್​ ಗೇಮ್ ಆಡುತ್ತಿದ್ದನು ಎಂದು ಹೇಳಲಾಗುತ್ತಿದ್ದು . ಆನ್​ಲೈನ್ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ ಆದನಾ ಅನ್ನೊ ಮಾತು ಕೇಳಿ ಬರ್ತಾ ಇದೆ,ಕಳೆದ ಹಲವು ದಿನಗಳಿಂದ ಆನ್ ಲೈನ್ ಗೆಮಿಂಗ್ ಹುಚ್ಚು ಬೆಳಸಿಕೊಂಡದ್ದ
ಹೀಗಾಗಿ ಆನ್ ಲೈನ್ ಗೇಮ್​ನಲ್ಲಿ ಹಣವನ್ನು ಕಳೆದುಕೊಂಡಿದ್ದ ಎನ್ನಲಾಗುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಸಾವಿನ ಹಿನ್ನೆಲೆ ಪೊಲೀಸ್ ಆಯುಕ್ತ ಶಶಿಕುಮಾರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದು ಆತ್ಮಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ಆತ ಮೃತಪಟ್ಟಿದ್ದನು. ಸದ್ಯ ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…..

More News

You cannot copy content of this page