Yash Toxic Movie: ಯಶ್ ಟಾಕ್ಸಿಕ್ ಸಿನಿಮಾಗೆ ಸಂಕಷ್ಟ ಹೈಕೋರ್ಟ್ ನಿಂದ ಹೊಂಬಶಳೆ ಫಿಲ್ಮ್ ಗೆ ನೋಟೀಸ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾಗೆ ಇದೀಗ ಸಂಕಷ್ಟ ಎದುರಾಗಿದ್ದು ಯಶ್ ನಟನೆಯ ಬಿಗ್ ಬಜೆಟ್ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರದ ಅರಣ್ಯ ಭೂಮಿಯಲ್ಲಿ ಸಿನಿಮಾ ಸೆಟ್ ಹಾಕಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್‌ಗೆ ಸಾರ್ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಸರ್ಕಾರದ ಅರಣ್ಯ ಭೂಮಿಯಲ್ಲಿ ಸಿನಿಮಾ ಸೆಟ್ ಹಾಕಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆವಿಎನ್ ಫಿಲ್ಮ್ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ನೀಡಲಾಗಿದೆ. ಇನ್ನು ಅರಣ್ಯ ಭೂಮಿಯಲ್ಲಿ ಸೆಟ್ ಹಾಕಲು ಅವಕಾಶ ಮಾಡಿಕೊಟ್ಟಿರುವ ಸರ್ಕಾರ, ಹೆಚ್‌ಎಂಟಿ ಕಂಪನಿಗೂ ಹೈಕೋರ್ಟ್ ನಿಂದ ನೋಟಿಸ್ ನೀಡಿದೆ.

ಪಿಐಎಲ್ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠದಿಂದ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಆಗಸ್ಟ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ. ಜೊತೆಗೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ ವಕೀಲರು, ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಅನಧಿಕೃತ ನಿರ್ಮಾಣ ಮಾಡಿರುವ ಸೆಟ್‌ ಅನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ.

More News

You cannot copy content of this page