Governor Notice To Siddaramaiah: ರಾಜ್ಯಪಾಲರಿಂದ ಶೋಕಾಸ್ ನೋಟಿಸ್ : ಸಂಪುಟ ಸಭೆಗೆ ಸಿಎಂ ಗೈರು…!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕಚೇರಿಯಿಂದ ಸಿಎಂಗೆ ಶೋಕಾಸ್ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಗುರುವಾರ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಗೈರಾದರು. ಸ್ವತಃ ಸಿಎಂ ವಿರುದ್ಧ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ನೈತಿಕತೆಯ ಆಧಾರವಾಗಿ ಅವರು ಸಂಪುಟ ಸಭೆಯಲ್ಲಿ ಭಾಗಿಯಾಗಿಲ್ಲ.

ಇದೇ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿ, ರಾಜಭವನದ ಕಚೇರಿಯಿಂದ ಸಿಎಂಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಬ್ರೇಕ್ ಫಾಸ್ಟ್ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಕ್ಯಾಬಿನೆಟ್ ಗೆ ಸಿಎಂ ಭಾಗಿಯಾಗಲ್ಲ. ಡಿಸಿಎಂಗೆ ಕ್ಯಾಬಿನೆಟ್ ನೇತೃತ್ವ ವಹಿಸಲು ಸಿಎಂ ನಿರ್ದೇಶನ ನೀಡಿದ್ದಾರೆ. ಇದರ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ನೋಟಿಸ್ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಿದ ಬಗ್ಗೆ ಏನು ತೀರ್ಮಾನ ಕೈಗೊಳ್ಳಬೇಕು ಎಂದು ನಿರ್ಧಾರ ಮಾಡುತ್ತದೆ.
ಸಿಎಂ ವಿರುದ್ಧನೇ ನೋಟಿಸ್ ಕೊಟ್ಟಿದ್ದರಿಂದ ಅವರು ಭಾಗಿಯಾಗಲ್ಲ. ಬ್ರೇಕ್ ಫಾಸ್ಟ್ ಸಭೆಯಲ್ಲಿ ಈ ಕುರಿತು ಚರ್ಚೆ ಮಾಡುತ್ತೇವೆ. ಕಾನೂನು ಸಾಧ್ಯಾಸಾಧ್ಯತೆಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಮಾತನಾಡಿ, ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಈ ವಿಚಾರದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಮೌಲ್ಯದ ಆಧಾರದಲ್ಲಿ ಸಿಎಂ ಕ್ಯಾಬಿನೆಟ್ ಸಭೆಗೆ ಗೈರಾಗುತ್ತಾರೆ. ಸಭೆಯಲ್ಲಿ ಶೋಕಾಸ್ ನೋಟಿಸ್ ಬಗ್ಗೆ ಚರ್ಚೆ ಆಗಲಿದೆ. ಮತ್ತೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಮುಡಾ ಹಗರಣಕ್ಕೆ ಸಂಬಂಧಿಸಿದ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ‌. ಈ ಬೆಳವಣಿಗೆ ರಾಜಕೀಯ ಆಯಾಮವನ್ನು ಪಡೆದುಕೊಳ್ಳುತ್ತಿದೆ.

More News

You cannot copy content of this page