ಬೆಂಗಳೂರು: ಕೆಂಗೇರಿಯಿಂದ ಮೈಸೂರುವರೆಗೆ ಪಾದಯಾತ್ರೆೆ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಸಕಾರ ಹಾಗೂ ಪೊಲೀಸ್ ಇಲಾಖೆಗೆ ಹೈಕೋರ್ಟ್ ಮೌಖಿಕ ಆದೇಶ ನೀಡಿದೆ.
ಈ ವಿಚಾರವಾಗಿ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ನ್ಯಾಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಾಯಪೀಠದ ಮುಂದೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಾಮ್ ಹಾಜರಾಗಿ ವಿಷಯ ಪ್ರಸ್ತಾಾಪಿಸಿದರು.
ಇದಕ್ಕೆೆ ಸ್ಪಂದಿಸಿದ ನ್ಯಾಾಯಪೀಠ, ಕೆಂಗೇರಿಯಿಂದ ಮೈಸೂರುವರೆಗೆ ಪಾದಯಾತ್ರ ಹಮ್ಮಿಿಕೊಳ್ಳಲು ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸಬೇಕು ಹಾಗೂ ಕಾನೂನು ರೀತಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮೌಖಿಕ ಆದೇಶ ನೀಡಿ, ವಿಚಾರಣೆಯನ್ನು ಆಗಸ್‌ಟ್ 14ಕ್ಕೆೆ ಮುಂದೂಡಿತು.
ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಹಾಗೂ ಮೈಸೂರು ಅಭಿವೃದ್ಧಿಿ ಪ್ರಾಾಧಿಕಾರದಲ್ಲಿ ನಡೆದ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರುವರೆಗೆ ಶಾಂತಿಯುತ ಪಾದಯಾತ್ರೆೆ ನಡೆಸಲು ಭಾರತೀಯ ಜನತಾ ಪಕ್ಷ ತೀರ್ಮಾನಿಸಿದೆ. ಅದರಂತೆ, ಪಾದಯಾತ್ರೆೆಗೆ ಅನುಮತಿ ನೀಡಬೇಕು ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜ್ಯಾಾಧ್ಯಕ್ಷರು ಸರ್ಕಾರ ಮತ್ತು ಸಂಬಂಧಪಟ್ಟವರಿಗೆ ಜುಲೈ 30ರಂದು ಮನವಿ ಸಲ್ಲಿಸಿದ್ದರು. ಆದರೆ, ಸರ್ಕಾರ ಮತ್ತು ಪೊಲೀಸರಿಂದ ಯಾವುದೇ ಉತ್ತರ ಬಂದಿಲ್ಲ. ಆಗಸ್‌ಟ್ 1ಕ್ಕೆೆ ಪುನಃ ಮನವಿ ಮಾಡಲಾಗಿದೆ ಆದರೂ, ಅನುಮತಿ ನೀಡುವ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದ್ದರಿಂದ ಶಾಂತಿಯುತ ಪಾದಯಾತ್ರೆೆಗೆ ಅನುಮತಿ ನೀಡುವಂತೆ ಸರ್ಕಾರ, ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.