Devaraja Arasu Award: ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಕೆ ಕಾಂತ ಆಯ್ಕೆ

ಬೆಂಗಳೂರು: ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್ . ಕೆ. ಕಾಂತ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ತಿಳಿಸಿದ್ದಾರೆ.

ಬುಧವಾರ ವಿಕಾಸ ಸೌಧ ತಮ್ಮ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ಐದು ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್. ಕೆ .ಕಾಂತ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆʼ ಎಂದು ಸಚಿವ ಶಿವರಾಜ್ ತಂಗಡಗಿ ಅವರು ತಿಳಿಸಿದರು.

More News

You cannot copy content of this page