Darshan Shift To Ballari Jail: ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರಿಸುವ ಬಗ್ಗೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದರು.

More News

You cannot copy content of this page