CONGRESS RAJBHAVAN CHALO: NDA ನಾಯಕರ ಮೇಲೂ ಪ್ರಾಸಿಕ್ಯೂಷನ್‌ಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ರಾಜಭವನ ಚಲೋ! ಗವರ್ನರ್ ವಿರುದ್ಧ ಧಿಕ್ಕಾರ

ಬೆಂಗಳೂರು: ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಪ್ರಜಾತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧ ತನಿಖೆಗೆ, ಕ್ರಮಕ್ಕೆ ಅನುಮತಿ ನೀಡದ ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ, ನಂತರ ಅಲ್ಲಿಂದ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಸಚಿವರಾದ ಜಿ.ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಡಿ.ಸುಧಾಕರ್, ಹೆಚ್.ಕೆ. ಪಾಟೀಲ್, ಬೋಸರಾಜು, ಶರಣಪ್ರಕಾಶ್ ಪಾಟೀಲ್, ಜಮೀರ್ ಅಹ್ಮದ್, ಈಶ್ವರ್ ಖಂಡ್ರೆ, ವೆಂಕಟೇಶ್, ಎಸ್.ಎಸ್ ಮಲ್ಲಿಕಾರ್ಜುನ್ ದಿನೇಶ್ ಗುಂಡೂರಾವ್, ಶಾಸಕರಾದ ಶಿವಲಿಂಗೇಗೌಡ, ಪ್ರದೀಪ್ ಈಶ್ವರ್, ನಯನ ಮೋಟಮ್ಮ, ಕಂಪ್ಲಿ ಗಣೇಶ್, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಯು. ಬಿ ವೆಂಕಟೇಶ್, ಸುಧಾಮ್ ದಾಸ್, ಐವಾನ್ ಡಿಸೋಜ, ಸಂಸದರಾದ ಶ್ರೇಯಸ್ ಪಟೇಲ್, ಹಿರಿಯ ಮುಖಂಡರಾದ ವೀರಪ್ಪ ಮೊಯ್ಲಿ, ಎಂ.ಆರ್ ಸೀತಾರಾಮ್, ವಿ.ಎಸ್ ಉಗ್ರಪ್ಪ, ಆರ್.ವಿ ದೇಶಪಾಂಡೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

More News

You cannot copy content of this page