ಬೆಂಗಳೂರು: ಬಹು ಬೇಡಿಕೆಯ ಚಿತ್ರ “ಮ್ಯಾಕ್ಸ್” ಇದೀಗ ತನ್ನ ಮೊದಲ ಗೀತೆ “ಮ್ಯಾಕ್ಸಿಮಮ್ ಮಾಸ್” ಅನ್ನು ಬಿಡುಗಡೆ ಮಾಡಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಈ ಮಾಸ್ ಗೀತೆಯನ್ನು ಇಂದು ಬಿಡುಗಡೆ ಮಾಡಿ, ಎಲ್ಲೆಡೆ ಸದ್ದು ಮಾಡುತ್ತಿದೆ.
ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಈ ಹಾಡಿಗೆ, ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಸಾಹಿತ್ಯ ರಚಿಸಿದ್ದು, ಚೇತನ್ ಗಂಧರ್ವ ಮತ್ತು ಎಂ.ಸಿ. ಬಿಜ್ಜು ದನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿರುತ್ತಾರೆ. ಒಟ್ಟಾರೆ ಅಭಿಮಾನಿಗಳಿಗೆ ಈ ಮಾಸ್ ಗೀತೆಯು ರಸದೌತಣವನ್ನು ಉಣಬಡಿಸಿದೆ ಎಂದರೆ ಉತ್ಪ್ರೇಕ್ಷೆಯಲ್ಲ.
“ಮ್ಯಾಕ್ಸ್” ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿರುತ್ತಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಮತ್ತು ಮುಂತಾದವರು ಈ ಚಿತ್ರದಲ್ಲಿ ನಟಿಸಿರುತ್ತಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ, ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿರುತ್ತಾರೆ.