CASTING COUCH IN SANDALWOOD: ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.

  • ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ
  1. ಜಿಲ್ಲೆಗಳ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ‌ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ,‌ ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ‌ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ ಎಂದುಸಚಿವೆ ಲಕ್ಷ್ಮೀ ಹೆಬ್ಳಾಳ್ಕರ್ ಹೇಳಿದ್ದಾರೆ.

More News

You cannot copy content of this page