ಹುಬ್ಬಳ್ಳಿ: ಪುನಃ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೆ.ಎಸ್ ಈಶ್ವರಪ್ಪ ತವರು ಮನೆಗೆ ಹೋಗದೇ ಇರುವ ಹೆಣ್ಣು ಮಗಳು ಯಾರಾದರೂ ಇದ್ದಾರಾ? ಹಾಗೇಯೇ ಪಕ್ಷದಲ್ಲಿನ ಸಮಸ್ಯೆಗಳು ಸರಿಯಾದ ಮೇಲೆ ಪುನಃ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಟುಂಬ ರಾಜಕಾರಣ ನಡೆಯುತ್ತಿದೆ. ಅದನ್ನು ಮೊದಲು ಹೋಗಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕುಟುಂಬ ರಾಜಕಾರಣ ಮಾಡಬಾರದೆಂದು ಹೇಳಿದ್ದಾರೆ. ಆದ್ರೆ ರಾಜ್ಯದ ಬಿಜೆಪಿಯಲ್ಲಿ ಅದೇ ನಡೆಯುತ್ತಿದೆ. ಎಲ್ಲವೂ ಸರಿಯಾದ ನಂತರ ನಾನೇ ಸೇರುತ್ತೇನೆ ಎಂದರು