ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಪೂರ್ವಾನುಮತಿ ಆದೇಶ ಎತ್ತಿ ಹಿಡಿದ ಏಕ ಸದಸ್ಯ ಪೀಠ ಆದೇಶ ಪ್ರಶ್ನಿಸಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರ, ರಾಜ್ಯಪಾಲರ ಕಚೇರಿಯ ಕಾರ್ಯದರ್ಶಿ,ಖಾಸಗಿ ದೂರುದಾರರಾದ, ಸ್ನೇಹಮಯಿ ಕೃಷ್ಣಾ, ಟಿ.ಜೆ. ಅಬ್ರಹಾಂ,ಪ್ರದೀಪ್
ಮತ್ತಿತರರನ್ನು ಪ್ರತಿವಾದಿಯನ್ನಾಗಿಸಲಾಗಿದೆ.
ಸೆಪ್ಟಂಬರ್ 24 ರಂದು ಹೈಕೋರ್ಟ ಏಕ ಸದಸ್ಯ ಪೀಠ ಸಿಎಂ ವಿರುದ್ದ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿತ್ತು.
ಒಂದು ತಿಂಗಳ ಬಳಿಕ ಹೈಕೋರ್ಟ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ