CP YOGESHWAR NOMINATION: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚನ್ನಪಟ್ಟಣ: ಜನರು ಸಿ.ಪಿ.ಯೋಗೇಶ್ವರ ನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್ ರವರ ಕಚೇರಿಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್ ಡಿ ಎ ನಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರ್ ನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕೂಡ, ಕಾಂಗ್ರೆಸ್ ನ ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದರು.

More News

You cannot copy content of this page