Kannada Sahitya Sammelana 2024: ಮಂಡ್ಯ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕರಾಗಿ ಆಯ್ಕೆಯಾದ ಗೊ.ರು. ಚನ್ನಬಸಪ್ಪ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ

ಬೆಂಗಳೂರು: ಸಕ್ಕರೆನಾಡು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕನ್ನಡ ಪರಿಚಾರಿಕೆ, ಸಂಘಟನೆ, ಜಾನಪದ, ಶಿಕ್ಷಣ, ಮಾಧ್ಯಮ ಸೇರಿ ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಗೊರುಚ ಅವರು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಕ್ಕೂ ಧುಮುಕಿದ್ದ ಗೊರುಚ ಅವರು, ಕನ್ನಡ ನಾಡುನುಡಿಗೆ ಅಪಾರ ಕೊಡುಗೆ ನೀಡಿರುವ ಸಂಗತಿಯನ್ನು ಸ್ಮರಣೆ ಮಾಡಿಕೊಂಡಿದ್ದಾರೆ.

ಅಲ್ಲದೆ; ಗೊರುಚ ಅವರು ಲೋಕಸಭೆಯಲ್ಲಿ ನಾನು ಪ್ರತಿನಿಧಿಸುವ ಮಂಡ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುತ್ತಿರುವುದು ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ ಕೇಂದ್ರ ಸಚಿವರು ಹೇಳಿದ್ದಾರೆ.

More News

You cannot copy content of this page