Manmohan Singh Psses Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

ಬೆಂಗಳೂರು: ಭಾರತದ ಮಾಜಿ ಪ್ರಧಾನಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ ಹರಿಕಾರರೂ ಆಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು ಎಂದು ತಿಳಿಸಿದ್ದಾರೆ.

ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಆರ್ಥಿಕ ಸುಧಾರಣೆಗಳ ಮೂಲಕ ಭಾರತಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟವರು ಅವರು. ಅವರ ಕೊಡುಗೆಗಳು ಚಿರಸ್ಮರಣೀಯ ಎಂದಿರುವ ಕೇಂದ್ರ ಸಚಿವರು; ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

More News

You cannot copy content of this page