PRESIDENT DROUPADI MURMU: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಆತ್ಮೀಯವಾಗಿ ಬೀಳ್ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಜನವರಿ 03 ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮಾನ್ಸ್) ಯಿಂದ ಆಯೋಜಿಸಲಾದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಪ್ರಯಾಣಿಸಿದರು.

ಗೌರವಾನ್ವಿತ ರಾಷ್ಟ್ರಪತಿಗಳನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಬೀಳ್ಕೊಟ್ಟರು

ಈ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಲೆಫ್ಟಿನೆಂಟ್ ಜನರಲ್ ಜಿತೇಂದ್ರ ಕುಮಾರ್ ಗೇರಾ, ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಡಾ. ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್, ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ ಸೇರಿದಂತೆ ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

More News

You cannot copy content of this page