ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಮಾರಾಕಾಸ್ತ್ರಗಳಿಂದ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ತಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ ಆದರೂ, ಪೊಲೀಸ್ ತನಿಖೆಯಿಂದ ಕೊಲೆಯ ಕಾರಣ ತಿಳಿದುಬರಬೇಕಿದೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.