ಬಿಜೆಪಿ ಸರ್ಕಾರದಲ್ಲಿ ರನ್ಯಾ ಯೋಜನೆಗೆ ಮಂಜೂರು, ಹಣ ಕಟ್ಟಿಲ್ಲ: ಎಂ ಬಿ ಪಾಟೀಲ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಅವರ ಟಿಎಂಟಿ ಸರಳು ತಯಾರಿಸುವ ಯೋಜನೆಗೆ ಹಿಂದಿನ ಬಿಜೆಪಿ ಸರಕಾರ ಅನುಮೋದನೆ ನೀಡಿತ್ತು. ಇದಕ್ಕೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಜಮೀನು ಮಂಜೂರು ಮಾಡಲು 2023ರ ಜನವರಿ 2ರಂದು ನಡೆದಿದ್ದ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ತೀರ್ಮಾನಿಸಿತ್ತು. ಆದರೆ ರನ್ಯಾ ಅವರು‌ ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಕಾರಣ ಅವರಿಗೆ ಜಮೀನಿನ ಹಂಚಿಕೆ ಮಾಡಿಲ್ಲ‌ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಸಚಿವರು ಮಾತನಾಡಿದರು.

More News

You cannot copy content of this page