ಬೆಂಗಳೂರು: ಶಿಷ್ಟಾಚಾರ ಸೌಲಭ್ಯಗಳ ಬಳಕೆಯನ್ನು ಪಡೆದುಕೊಳ್ಳಲು ಕಾರಣವಾದ ಸಂಗತಿಗಳು ಹಾಗೂ ಸಂದರ್ಭಗಳು ಮತ್ತು ಈ ಪ್ರಕರಣದಲ್ಲಿ ರಾಜ್ಯ ಐ.ಪಿ.ಎಸ್ ವೃಂದದ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ಮತ್ತು ಮೂಲ ಸೌಕರ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ರಾವ್, ಐಪಿಎಸ್ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.
ತನಿಖಾಧಿಕಾರಿಗಳು ತನಿಖೆಯನ್ನು ತಕ್ಷಣ ಪ್ರಾರಂಭಿಸಿ,ತನಿಖಾ ವರದಿಯನ್ನು ಒಂದು ವಾರದೊಳಗೆ ಸಲ್ಲಿಸುವುದು
ಸದರಿ ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ಎಲ್ಲಾ ರೀತಿಯ ನೆರವನ್ನು ನೀಡಲು ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾ ನಿರೀಕ್ಷಕರು(ಪೊಲೀಸ್ ಪಡೆಗಳ ಮುಖ್ಯಸ್ಥರು), ಕರ್ನಾಟಕ ರಾಜ್ಯ ಮತ್ತು ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇವರು ಸಂಬಂಧಪಟ್ಟವರಿಗೆ ಸೂಚಿಸುವುದು.