LALLU PRASAD YADAV: ಬಹುಕೋಟಿ ಮೇವು ಹಗರಣ: ಆರ್‌ಜೆಡಿ ಮುಖ್ಯಸ್ಥ ಲಾಲೂ ದೋಷಿ: ವಿಶೇಷ ಸಿಬಿಐ ಕೋರ್ಟ್ ತೀರ್ಪು

ರಾಂಚಿ: ಬಹುಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಬಹುಕೋಟಿ ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ಲಾಲೂ ಸೇರಿದಂತೆ ಎಲ್ಲಾ ೭೫ ಆರೋಪಿಗಳು ಅಪರಾಧಿಗಳು ಎಂದು ಮಹತ್ವದ ತೀರ್ಪು ನೀಡಿದೆ.

ಸಿಬಿಐ ವಿಶೇಷ ನ್ಯಾಯಾಧೀಶ ಎಸ್.ಕೆ.ಶಶಿ ಅವರು ೬ ಮಹಿಳೆಯರು ಸೇರಿದಂತೆ ೨೪ ಆರೋಪಿಗಳನ್ನು ಸಾಕ್ಷ್ಯಾಧಾರಗಳಿಲ್ಲದ ಕಾರಣ ಖುಲಾಸೆಗೊಳಿಸಿದ್ದಾರೆ.
ಫೆ.೧೮ರಂದು ಸಿಬಿಐ ಕೋರ್ಟ್ ನಿಂದ ಶಿಕ್ಷೆ ಪ್ರಮಾಣ ಪ್ರಕಟ
ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಎಲ್ಲಾ ೭೫ ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ ೧೮ ರಂದು ಘೋಷಿಸಲಾಗುವುದು ಎಂದು ವಿಶೇಷ ಸಿಬಿಐ ನ್ಯಾಯಾಲಯ ತೀರ್ಪಿನ ವೇಳೆ ಪ್ರಕಟಿಸಿದೆ.

೨೦೧೩ರಲ್ಲಿ ನಡೆದಿದ್ದ ೩೭.೬೭ ಕೋಟಿ ಮೌಲ್ಯದ ಚಾಯ್‌ಬಸಾ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ೫ ವರ್ಷ ಜೈಲು ಶಿಕ್ಷೆ ನೀಡಿ ನ್ಯಾಯಾಲಯ ತೀರ್ಪು ನೀಡಿದೆ. ೨೦೧೭ರಲ್ಲಿ ನಡೆದಿದ್ದ ೮೯.೨೭ ಲಕ್ಷ ಡಿಯೋಘರ್ ಮೇವು ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್ ೩.೫ ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

More News