BSY BIRTHDAY: 79ನೇ ವಸಂತಕ್ಕೆ ಕಾಲಿಟ್ಟ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ: ಬಿಎಸ್ ವೈಗೆ ಗಣ್ಯರಿಂದ ಶುಭ ಹಾರೈಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ೭೯ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನದ ಅಂಗವಾಗಿ ಬಿಎಸ್ ವೈ ಸರ್ಕಾರಿ ನಿವಾಸ ಕಾವೇರಿಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ೧೪ ರೈತರಿಗೆ ಉಚಿತವಾಗಿ ಟ್ರಾö್ಯಕ್ಟರ್ ವಿತರಿಸುವ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಿಕೊಂಡರು.
ಮಾಜಿ ಸಿಎಂ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ತೆರಳಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನ್ಮದಿನದ ಶುಭ ಕೋರಿದರು. ಬಿಎಸ್ ವೈ ಹುಟ್ಟುಹಬ್ಬದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.
ರೈತ ನಾಯಕ, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಹಿರಿಯ ನಾಯಕರು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಆ ಭಗವಂತ ಅವರಿಗೆ ಇನ್ನೂ ಉತ್ತಮ ಆರೋಗ್ಯ, ಚೈತನ್ಯ ಕೊಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ಶುಭ ಕೋರಿದ್ದಾರೆ.

ಧೀಮಂತ ನೇತಾರ, ರೈತಬಂಧು, ಜನಪರ ಹೋರಾಟ, ಜನಸೇವೆ, ಸಾಮಾಜಿಕ ನ್ಯಾಯಗಳನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡಿರುವ ಸರಿಸಾಟಿಯಿಲ್ಲದ ಜನನಾಯಕ, ನಿಕಟಪೂರ್ವ ಮುಖ್ಯಮಂತ್ರಿ, ಪೂಜ್ಯ ತಂದೆಯವರಾದ ಯಡಿಯೂರಪ್ಪ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು.

ದೇವರ ಆಶೀರ್ವಾದ ತಮ್ಮೊಂದಿಗೆ, ತಮ್ಮ ಮಾರ್ಗದರ್ಶನ ನಮಗೆ ಸದಾ ಇರಲಿ' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ನಾಡಿನ ಮುತ್ಸದ್ಧಿ ನಾಯಕರು, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ನೀಡಿ ಹರಸಲಿ, ಇನ್ನಷ್ಟು ಕಾಲ ರಾಜ್ಯಕ್ಕೆ ತಮ್ಮ ಮಾರ್ಗದರ್ಶನ ಸಿಗುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಶುಭಾಶಯ ಕೋರಿದ್ದಾರೆ.
ಮಾ.೫ರಂದು ಶಿಕಾರಿಪುರದಲ್ಲಿ ಬಿಎಸ್ ವೈಗೆ ಸನ್ಮಾನ
ಶಿಕಾರಿಪುರದಲ್ಲಿ ಮಾರ್ಚ್ ೫ ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಯಡಿಯೂರಪ್ಪ ಅವರು ಶಿವಮೊಗ್ಗ ಕ್ಷೇತ್ರಕ್ಕೆ ಸಾಕಷ್ಟು ನೀರಾವರಿ ಯೋಜನೆಗಳನ್ನ ನೀಡಿದ್ದಾರೆ. ಹೀಗಾಗಿ ಅಭಿನಂದನಾ ಸಮಾರಂಭ ಇಟ್ಟುಕೊಂಡಿದ್ದೇವೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಭಾಗಿಯಾಗಲಿದ್ದಾರೆ ಎಂದು ಸಂಸದ ಬಿ.ಎಸ್.ರಾಘವೇಂದ್ರ ಹೇಳಿದರು.

More News