PUNEET RAJKUMAR: ಪುನೀತ್ ರಾಜ್ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ: ಅಂದು ಇದನ್ನು ನಿರಾಕರಿಸಿದ್ದರು ಅಪ್ಪು ಪತ್ನಿ ಅಶ್ವಿನಿ

ಮೈಸೂರು: ಎಲೆಮರೆ ಕಾಯಿಯಂತೆ ಸಮಾಜ ಸೇವೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೊಡಗಿಕೊಂಡಿದ್ದರು. ಅದೇ ರೀತಿಯಲ್ಲಿ ಸ್ಯಾಂಡಲ್‌ವುಡ್‌ಗೆ ಪವರ್ ಸ್ಟಾರ್ ಪುನೀತ್ ರಾಜ್ ನೀಡಿದ ಕೊಡುಗೆ ಅಪಾರ. ತಾವು ಮಾಡುತ್ತಿರುವ ಸಮಾಜ ಸೇವಾ ಕಾರ್ಯಗಳ ಬಗ್ಗೆ ಎಂದೂ ಅವರು ಪ್ರಚಾರವನ್ನು ಬಯಸಿರಲಿಲ್ಲ. ಅದೇ ರೀತಿಯಲ್ಲಿ ಅವರು ತಮ್ಮ ಸಿನಿಮಾಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದರು.
ಅಕ್ಟೋಬರ್ ೨೯ರಂದು ಹೃದಯಾಘಾತದಿಂದ ನಿಧನ ಹೊಂದಿದ ಹಿನ್ನೆಲೆಯಲ್ಲಿ ಇಡೀ ಚಿತ್ರರಂಗವೇ ಶೋಕ ಸಾಗರದಲ್ಲಿ ಮುಳುಗಿತ್ತು. ಇದೀಗ ಸರಳ, ಸಜ್ಜನ, ಉತ್ತಮ ವ್ಯಕ್ತಿತ್ವಹೊಂದಿದ್ದ ಹಾಗೂ ಚಿತ್ರರಂಗಕ್ಕೆ ಸಲ್ಲಿಸಿದ ಅವಿಸ್ಮರಣೀಯ ಸೇವೆಗಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ ಅವರಿಗೆ ಮೈಸೂರು ವಿವಿ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಲಿದೆ.

ಮರಣೋತ್ತರ ಡಾಕ್ಟರೇಟ್ ಪದವಿಯನ್ನು ನೀಡಲಾಗುವುದು ಎಂದು ಮೈಸೂರು ವಿ. ವಿ. ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಪುನೀತ್ ಅವರ ನಿವಾಸಕ್ಕೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಭೇಟಿ ನೀಡಿ, ಗೌರವ ಡಾಕ್ಟರೇಟ್ ನೀಡುವ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಮಂತ್ರಣ ನೀಡಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ, ಪುನೀತ್ ರಾಜ್ ಕುಮಾರ್ ಅವರು ಬದುಕಿದ್ದಾಗ ಗೌರವ ಡಾಕ್ಟರೇಟ್ ಪದವಿಯನ್ನು ಪಡೆಯಲು ನಿರಾಕರಿಸಿದ್ದರು ಎಂದು ತಿಳಿಸಿದ್ದಾರೆ.

More News