ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟಿಕೆ ಬಗ್ಗೆ ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿಲ್ಲ, ಅವರ ಪುಂಡಾಟಿಕೆಯಿಂದ ಶಾಂತಿ ಸುವ್ಯವಸ್ಥೆಗೆ ಭಂಗ ಆಗಿತ್ತು, ಯಾರು ಇಂತಹ ಕೃತ್ಯಗಳನ್ನು ಮಾಡಿದ್ದಾರೋ ಅವರ ಮೇಲೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಂಡಿದ್ದು ನಿಜ, ಆದರೆ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ನೆಲ, ಜಲ ಭಾಷೆ ಬಗ್ಗೆ ನಾವು ಲಘುವಾಗಿ ತೆಗೆದುಕೊಳ್ಳಲ್ಲ, ಏನು ಕ್ರಮ ತೆಗೆದುಕೊಳ್ಳಬೇಕೋ ಆ ಕ್ರಮಗಳನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ದಿ ಕಾಶ್ಮೀರ ಫೈಲ್ಸ್ ಸಿನಿಮಾ ಡಬ್ಬಿಂಗ್
ದಿ ಕಾಶ್ಮೀರ ಫೈಲ್ಸ್ ಸಿನಿಮಾ ಕನ್ನಡಕ್ಕೆ ಡಬ್ಬಿಂಗ್ ಆಗಬೇಕು, ಈಗ ಹಿಂದಿಯಲ್ಲಿ ಬಿಡುಗಡೆ ಆಗಿದೆ, ಕನ್ನಡದಲ್ಲೂ ಬಂದರೆ, ಪ್ರತಿಯೊಬ್ಬರಿಗೂ ಅರ್ಥವಾಗುತ್ತದೆ ಎಂದು ಗೃಹ ಸಚಿವರು ತಿಳಿಸಿದರು. ಕನ್ನಡದಲ್ಲಿ ಈ ಸಿನಿಮಾ ಡಬ್ಬಿಂಗ್ ಆದರೆ, ಹಿಂದಿ ಬಾರದವರಿಗೂ ಅರ್ಥ ಆಗುತ್ತೆ, ಕನ್ನಡದಲ್ಲಿ ಬಂದರೆ ಒಳ್ಳೆಯದು ಎಂದು ತಿಳಿಸಿದರು.