EMOTIONAL CONFUSING FROM BJP: ಭಾವನಾತ್ಮಕ ವಿಚಾರ ಸೃಷ್ಟಿಸಿ, ಗೊಂದಲ ಮೂಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ಭಾವನಾತ್ಮಕ ವಿಚಾರಗಳನ್ನು ಸೃಷ್ಟಿಸಿ ಗೊಂದಲ ಮೂಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು, ನಾಲ್ಕು ತಿಂಗಳ‌ ಹಿಂದೆಯೇ ಈ ಬಗ್ಗೆ ನಾನು ಅನುಮಾನ ವ್ಯಕ್ತಪಡಿಸಿದ್ದ, ಅದರಂತೆಯೇ ಅವರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದರು.
ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕ ರಾಜ್ಯದಲ್ಲಿ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ, ಇದು ಮುಂಬರುವ ದಿನಗಳಲ್ಲಿ ರಾಜ್ಯ, ದೇಶದ ಶಾಂತಿಯನ್ನು ಹದಗೆಡಿಸುತ್ತದೆ ಎಂದು ಅನುಮಾನ ವ್ಯಕ್ತಪಡಿಸಿದರು. ಇದುವರೆಗೂ ಕೇವಲ ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಅಳವಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಜನಸಾಮಾನ್ಯರು ಬಿಜೆಪಿಯ ಈ ಆಟವನ್ನೆಲ್ಲಾ ನೋಡುತ್ತಿದ್ದಾರೆ, ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಕೇಂದ್ರದಿಂದ ಜನರ ದಿಕ್ಕು ತಪ್ಪಿಸುವ ಕೆಲಸ
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಜನರ ದಿಕ್ಕು ತಪ್ಪಿಸುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಇದೇ ಸಂದರ್ಭದಲ್ಲಿ ಆರೋಪಿಸಿದ ಅವರು, ಬೆಲೆ ಏರಿಕೆ ವಿಚಾರ ಇದೀಗ ನಗಣ್ಯವಾಗಿದೆ. ಜನಸಾಮಾನ್ಯರು ಇದರ ಬಗ್ಗೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಅವರೇ ಸಮಸ್ಯೆಯಿಂದ ತತ್ತರಿಸುತ್ತಾರೆ ಎಂದು ಅಭಿಪ್ರಾಯಪಟ್ಟರು.

ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಸಮಗ್ರ ಉದ್ದಾರ ಮಾಡಿದ್ದಾರಂತೆ, ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲವೆನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರಲ್ಲದೆ, ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಖಂಡಿಸಿದರು.

More News