ಬೆಂಗಳೂರು : ತಾಯಿ ಚನ್ನಮ್ಮಾ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದರೆ, ಅದರ ಬಗ್ಗೆ ತಲೆಕೆಡೆಸಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಮಾಡಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದು ಹೇಳಿದ ಅವರು, ಕೊಟ್ಟಿದ್ದರೂ ಸಹ ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ, ನಮ್ಮ ಕುಟುಂಬದಲ್ಲಿ ಎಲ್ಲಾ ವ್ಯವಹಾರ ತೆರೆದ ಪುಸ್ತಕ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದೂ ಮಹತ್ವ ಕೊಟ್ಟಿಲ್ಲ, ನಾವು ಸಹ ನಮ್ಮ ರಾಜಕೀಯ ಜೀವನದಲ್ಲಿ ಹಣಕ್ಕೆ ಪ್ರಾಮುಖ್ಯತೆ ಕೊಟ್ಟವರಲ್ಲ, ನಾವು ಪರಿಶುದ್ಧವಾಗಿರಬೇಕು ಅಷ್ಟೇ, ನೋಟಿಸ್ ಕೊಟ್ಟಿದ್ದಾರೆ ಅದಕ್ಕೆ ಏನ್ ಉತ್ತರ ಕೊಡಬೇಕೋ ಕೊಟ್ಟರಾಯ್ತು ಎಂದರು.
ನನ್ನ ಸಹೋದರನಿಗೂ ಅದನ್ನೇ ಹೇಳಿದ್ದೇನೆ, ಇದನ್ನ ನಾವು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ, ಕಾನೂನಾತ್ಮಕವಾಗಿ ಆಸ್ತಿ ವಿಚಾರವಾಗಿ ಕೇಳಿರ್ತಾರೆ ಅದರ ಎಲ್ಲಾ ದಾಖಲಾತಿಗಳನ್ನು ಅವರಿಗೆ ನೀಡದರಾಯಿತು, ಇದನ್ನ ರಾಜಕೀಯವಾಗಿ ಪ್ರಚಾರ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.




