BJP – TMC LEGISLATERS FIGHT IN WESTBENGAL: ಪಶ್ಚಿಮಬಂಗಾಳದ ವಿಧಾನಸಭೆಯಲ್ಲಿ ಬಿಜೆಪಿ- ಟಿಎಸಿ ಶಾಸಕರ ಹೊಡೆದಾಟ : ಐವರು ಶಾಸಕರು ಅಮಾನತು

ಪಶ್ಚಿಮ ಬಂಗಾಳ: ಪಶ್ಚಿಮಬಂಗಾಳದ ವಿಧಾನಸಭೆಯಲ್ಲಿ ಇಂದು ಆಡಳಿತರೂಢ ಟಿಎಂಸಿ ಮತ್ತು ಬಿಜೆಪಿ ಶಾಸಕರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ಮಾತಿನ ಚಕಮಕಿ ನಡೆದು ಶಾಸಕರು ಪರಸ್ಪರ ಹೊಡೆದಾಟ ನಡೆಸಿದ್ದಾರಲ್ಲದೆ, ಒಬ್ಬರಿಗೊಬ್ಬರು ಒದ್ದು ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಈಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಪಶ್ಚಿಮ ಬಂಗಾಳದ ರಾಮಪುರಹತ್ ನಲ್ಲಿ ನಡೆದ ಹತ್ಯಾಕಾಂಡ ವಿಚಾರವಾಗಿ ಬಿಜೆಪಿಯ ಸುವೇಂದು ಅಧಿಕಾರಿ ಪ್ರಸ್ತಾಪ ಮಾಡಿ ಇದನ್ನು ಚರ್ಚೆ ಮಾಡಬೇಕೆಂದು ಪಟ್ಟುಹಿಡಿದಿದ್ದರು. ಇದೇ ಸಂದರ್ಭದಲ್ಲಿ ಎರಡೂ ಪಕ್ಷದ ಶಾಸಕರು ಮಾತಿನ ಚಕಮಕಿ ನಡೆದಿತ್ತು ಹಾಗೆಯೇ ಒಬ್ಬರಿಗೂಬ್ಬರು ನಿಂದಿಸಿ, ಹೊಡೆದಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ಸಂಬಂಧ ಐವರು ಶಾಸಕರನ್ನು ಅಮಾನತ್ತು ಮಾಡಲಾಗಿದೆ. ಬಿಜೆಪಿ ನಾಯಕರು ಈ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ಮನೋಜ್ ಅವರಿಗೆ ತೀವ್ರ ಗಾಯಗಳಾಗಿವೆ ಎಂದು ಆರೋಪಿಸಿದ್ದಾರೆ. ಹಾಗೆಯ ಟಿಎಂಸಿ ಶಾಸಕ ಅಸಿತ್ ಮಜುಂದಾರ್ ಅವರೂ ಗಾಯಗೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಬಿಜೆಪಿ ಶಾಸಕರು ಘಟನೆ ನಂತರ ಸದನದಿಂದ ಹೊರ ನಡೆದಿದ್ದಾರೆ ಎಂದು ತಿಳಿದುಬಂದಿದೆ.

More News