ಬೆಳಗಾವಿ : ರಾಜ್ಯದಲ್ಲಿ ಹಲಾಲ್ ಮತ್ತು ಜಟ್ಕಾ ಕಟ್ ವಿವಾದವನ್ನೇ ಸೃಷ್ಟಿಸುತ್ತಿದೆ. ಇದರ ನಡುವೆ ಸಚಿವೆಯೊಬ್ಬರು ಹಿಂದೂಪರ ಸಂಘಟನೆಗಳ ಪರ ನಿಂತಿದ್ದು, ಹಲಾಲ್ ಕಟ್ ಮಾಡಿದಂತೆ ಜಟ್ಕಾ ಕಟ್ ಮಾಡುವುದರ ಮೂಲಕ ನಮ್ಮ ದೇವರಿಗೆ ಪ್ರಿಯವಾದ ಕೆಲಸ ಮಾಡಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಬೆಳಗಾವಿಯ ನಿಪ್ಪಾಣಿಯಲ್ಲಿ ಯುಗಾದಿ ಹಬ್ಬವನ್ನು ಆಚರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲಾಲ್ ಕಟ್ ಸಂಬಂಧ ಹಿಂದೂಪರ ಸಂಘಟನೆಗಳು ಮಾಡುತ್ತಿರುವುದು ಸರಿಯಾಗಿದೆ. ನಾವು ಹಿಂದೂಪರ ಸಂಘಟನೆಗಳ ಪರವಾಗಿದ್ದೇವೆ ಎಂದು ತಿಳಿಸಿದರು.
ಈ ಸಂಬಂಧ ಮುಖ್ಯಮಂತ್ರಿ ಹಾಗೂ ಹಿರಿಯ ಸಚಿವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಮುಂದೆ ಪ್ರತಿವರ್ಷ ಮುಜರಾಯಿ ಇಲಾಖೆ ವತಿಯಿಂದ ಧಾರ್ಮಿಕ ದಿನವನ್ನಾಗಿ ಯುಗಾದಿ ಹಬ್ಬವನ್ನು ಆಚರಿಸಲಾಗುವುದು ಎಂದು ತಿಳಿಸಿದರು.




