MLA ZAMEER IS SILENT: ಸೈಲೆಂಟಾದ ಜಮೀರ್, ಪಕ್ಷದ ಕಾರ್ಯಕ್ರಮಗಳಿಗೆ ಗೈರು: ಹಲವು ಅನುಮಾನಗಳಿಗೆ ಎಡೆಮಾಡಿದ ನಡೆ

ಬೆಂಗಳೂರು: ಚಾಮರಾಜಪೇಟೆ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಿಗೆ ಗೈರು ಹಾಜರಾಗುತ್ತಿದ್ದಾರೆ. ಹಾಗೆಯೇ ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೇ ಸೈಲೆಂಟಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಜಮೀರ್ ಅವರ ನಡೆ ಈಗ ಅನುಮಾನಕ್ಕೆಡೆ ಮಾಡಿದ್ದು, ಹಿರಿಯ ನಾಯಕರು ಅವರನ್ನು ಮೂಲೆಗುಂಪು ಮಾಡುತ್ತಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿವೆ.
ಎರಡು ದಿನಗಳ ರಾಜ್ಯ ಭೇಟಿಗಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಭೇಟಿ ಸಂದರ್ಭ ಹಾಗೂ ನಂತರ ಕೆಪಿಸಿಸಿಯಲ್ಲಿ ನಡೆದ ಸಭೆಯಲ್ಲಿ ಕಾಣಿಸಿಕೊಳ್ಳಲಿಲ್ಲ. ಹಾಗೆಯೇ ಈ ಹಿಂದೆ ನಡೆದ ಮೇಕೆದಾಟು ಹೋರಾಟದಲ್ಲೂ ಕೊನೆಯ ದಿನ ಅವರ ಕ್ಷೇತ್ರದಲ್ಲಿನ ಪಾದಯಾತ್ರೆ ಸಂದರ್ಭದಲ್ಲಿ ಕಾಣಿಸಿಕೊಂಡಿದ್ದರು. ಇದರಿಂದ ಪಕ್ಷದ ವಲಯದಲ್ಲಿ ಜಮೀರ್ ಅವರ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿಬರುತ್ತಿವೆ.
ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಜಮೀರ್ ಗುರುತಿಸಿಕೊಂಡಿದ್ದು ಅನೇಕ ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು.

ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಖಾನ್, ಶಾಸಕ ಹ್ಯಾರೀಸ್ ಅವರು ಪಕ್ಷದಲ್ಲಿ ಸಕ್ರೀಯರಾಗಿರುವುದು ಜಮೀರ್ ಅವರ ಅಸಮಾಧಾನಕ್ಕೆ ಕಾರಣವಾಗಿರಬಹುದು ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ.

More News