VOTE BANK POLITICS: ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನವಿದು: ಸಿ ಟಿ ರವಿ ಆರೋಪ

ಹುಬ್ಬಳ್ಳಿ ಗಲಭೆಕೋರರಿಗೆ ಶಾಸಕ ಜಮೀರ್ ಅಹಮದ್ ಖಾನ್ ಸಹಾಯ ಮಾಡುವುದರ ಮೂಲಕ ಅವರು ಆ ಭಾಗದ ಹೀರೋ ಆಗೋಕೆ ಹೊರಟಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರಿಗೆ ಸಹಾಯ ಮಾಡುವುದು ಸರಿಯಲ್ಲ, ಘಟನೆಯಲ್ಲಿ ಮತಾಂಧ ಶಕ್ತಿಗಳು ಇವೆ, ಇವರನ್ನ ಇಡೀ ಸಮಾಜ ಖಂಡಿಸಬೇಕಾಗುತ್ತದೆ, ಶಾಸಕರೇ ಸಹಾಯ ಮಾಡಿದರೆ ಸಹಕಾರ ಕೊಟ್ಟಂತೆ ಎಂದು ಟೀಕಿಸಿದರು.
ಹುಬ್ಬಳ್ಳಿ ಕೋಮುಗಲಭೆ ಪ್ರಕರಣದಲ್ಲೀಗ ಶಾಸಕ ಜಮೀರ್ ಅಹಮದ್ ಖಾನ್ ಅವರ ಹೆಸರು ಕೇಳಿಬರುತ್ತಿದೆ, ಈ ಹಿಂದೆ ಡಿ ಜೆ ಹಳ್ಳಿ ಮತ್ತು ಪಾದರಾಯನಪುರ ಗಲಭೆಯಲ್ಲೂ ಅವರ ಹೆಸರು ಕೇಳಿಬಂದಿತ್ತು ಎಂದು ಶಾಸಕ ಸಿ ಟಿ ರವಿ ಆರೋಪಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗೋ ಕೆಲಸ ಮಾಡುತ್ತಿದ್ದಾರೆ, ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿಯಾಗಿ ಇಟ್ಟುಕೊಳ್ಳುವ ಪ್ರಯತ್ನವಿದು, ನೆರವು ಕೊಡುವ ಪಾತ್ರದ ಹಿಂದೆ ಕಾಂಗ್ರೆಸ್ ಇರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದರು.

ಗಲಭೆ ಮಾಡುವವರಿಗೆ ನೆರವು ಒದಗಿಸುವ ರೀತಿ ಜಮೀರ್, ಕಾಂಗ್ರೆಸ್ ನಡುವಳಿಕೆ ಗಮನಿಸಿದರೆ, ಹಿಜಾಬ್ ಹಿಂದೆ ಪಿಎಫೈ ಒಂದೇ ಅಲ್ಲ ಕಾಂಗ್ರೆಸ್ ಇದೆ ಅನ್ನೋ ಅನುಮಾನ ಕಾಡುತ್ತಿದೆ ಎಂದು ಆರೋಪಿಸಿದರು. ಹೇಳಿಕೆ ನೀಡುವಲ್ಲಿ ನಿಸ್ಸೀಮರಾಗಿರುವ ಸಿ ಟಿ ರವಿ ಅವರು ಎಲ್ಲದ್ದಕ್ಕೂ ಕಾಂಗ್ರೆಸ್ ಕಾರಣ ಎನ್ನುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅವರದ್ದೇ ಸರ್ಕಾರವಿದ್ದು, ತನಿಖೆ ನಡೆಸಬೇಕಾದವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಬಿಜೆಪಿ ಪ್ರತಿಯೊಂದು ಪ್ರಕರಣದಲ್ಲಿ ತಿಪ್ಪೆ ಸಾರಿಸುವುದಾಗಿದ್ದರೆ ದಿವ್ಯಾ ಹಾಗರಗಿ ಮೇಲೆ ಎಫ್.ಐ.ಆರ್. ಆಗುತ್ತಿರಲಿಲ್ಲ ಎಂದಿದ್ದಾರೆ. ಎಫ್.ಐ.ಆರ್. ಮಾಡಿದ್ದು, ಸಿಐಡಿಗೆ ವಹಿಸಿದ್ದು, ಆಕೆ ಗಂಡನನ್ನ ಬಂಧಿಸಿದ್ದು ಬಿಜೆಪಿ ಸರ್ಕಾರ ಎಂದ ಅವರು ಬೇರೆ ಯಾವುದೇ ಸರ್ಕಾರವಿದ್ದರೂ ಇಂತಹ ದೊಡ್ಡ ಪ್ರಕರಣದಲ್ಲಿ ಕಿಂಗ್ ಪಿನ್ ಗಳನ್ನು ಬಂಧಿಸುತ್ತಿದ್ದರು.

More News