PM MODI: ಎಲ್ಲಾ ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಗೆ ಪ್ರೋತ್ಸಾಹಿಸಬೇಕು: ಪ್ರಧಾನಿ ನರೇಂದ್ರ ಮೋದಿ

ನವದಹೆಲಿ: ದೇಶದ ಎಲ್ಲಾ ರೀತಿಯ ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಬಳಸಿ ಪ್ರೋತ್ಸಾಹಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನ್ಯಾಯಾಂಗವನ್ನು ಒತ್ತಾಯಿಸಿದ್ದಾರೆ.
ನವದಹೆಲಿಯ ವಿಜ್ಞಾನಭವನದಲ್ಲಿ ಇಂದು ನಡೆದ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಬಳಸಿ ಪ್ರೋತ್ಸಾಹಿಸಬೇಕು ಇದರಿಂದ ದೇಶದ ಸಾಮಾನ್ಯ ನಾಗರಿಕರಿಗೆ ವಿಶ್ವಾಸ ಮೂಡುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

ನ್ಯಾಯಾಂಗಕ್ಕೆ ಅವಶ್ಯವಿರುವ ಮೂಲಸೌಕರ್ಯಗಳ ಸುಧಾರಣೆ ಮತ್ತು ನವೀಕರಣಕ್ಕೆ ಸರ್ಕಾರ ಕೆಲಸ ಮಾಡುತ್ತಿದೆ, ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನಗಳನ್ನು ಅಳವಡಿಸಿ ಡಿಜಿಟಲ್ ಇಂಡಿಯಾ ಮಿಷನ್ ನ ಅತ್ಯಗತ್ಯ ಭಾಗವೆಂದು ಪರಿಗಣಿಸಲಾಗಿದೆ ಎಂದು ಹೇಳಿದರು.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದೇಶ ನಾನಾ ರಾಜ್ಯಗಳ ಮುಖ್ಯಮಂತ್ರಿ ಮತ್ತು ಮುಖ್ಯ ನ್ಯಾಯಮೂರ್ತಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

More News