ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ಥೆಯ ಚಿಕಿತ್ಸೆಗಾಗಿ 1 ಲಕ್ಷ ಹಣ: ಸರ್ಕಾರಿ ಕೆಲಸಕ್ಕಾಗಿ ಸಿಎಂ ಜತೆ ಚರ್ಚಿಸಲಾಗುವುದು: ಸಚಿವ ಸುಧಾಕರ್

ಬೆಂಗಳೂರು : ಪ್ರಿಯಕರನಿಂದ ಆಸಿಡ್ ದಾಳಿಗೆ ತುತ್ತಾಗಿರುವ ಸಂತ್ರಸ್ತೆಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಚಿವ ಸುಧಾಕರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸಂತ್ರಸ್ಥೆ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾನೂನು ಪ್ರಕಾರ ಸಂತ್ರಸ್ತೆಗೆ ಯಾವುದಾದರು ಒಂದು ಹುದ್ದೆ ನೀಡಲಾಗುತ್ತದೆ ಎಂದು ತಿಳಿಸಿದ ಅವರು, ಈಗ ಮೊದಲಿಗೆ ಆಕೆ ಗುಣಮುಖಳಾಗಿ ಬರಲು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು. ವೈದ್ಯರು ಕೂಡ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ, ಸಂತ್ರಸ್ತೆಯ ದೇಹದಲ್ಲಿ ಶೇಕಡಾ 35ರಷ್ಟು ಸುಟ್ಟ ಗಾಯಗಳಾಗಿವೆ. ತುಂಬಾ ಕ್ರಿಟಿಕಲ್ ಕಂಡೀಷನ್ ನಲ್ಲಿ ಇದ್ದಾರೆ ಎಂದು ಅವರು ತಿಳಿಸಿದರು.
ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತೆಗೆ ಒಂದು ಲಕ್ಷ ರೂಪಾಯಿ ಚೆಕ್ ನೀಡಲಾಗಿದೆ, ಸಂತ್ರಸ್ತೆಯ ವೈದ್ಯಕೀಯ ವೆಚ್ಚಕ್ಕಾಗಿ ಚೆಕ್ ವಿತರಣೆ ಮಾಡಲಾಗಿದೆ, ಬಿಬಿಎಂಪಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಸಹಾಯ ಹಸ್ತ ನೀಡಲಾಗುವುದು ಎಂದು ಸುಧಾಕರ್ ತಿಳಿಸಿದರು.
ಇನ್ನೂ ಹೆಚ್ಚಿನ ಸಹಕಾರ ಬೇಕಾದಲ್ಲಿ ಸರ್ಕಾರದ ವತಿಯಿಂದ ನೀಡುವುದಾಗಿ ಭರವಸೆ ನೀಡಿದ ಸಚಿವರು, ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

More News