ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ಮೂವರು ಡಿಸಿಎಂಗಳನ್ನು ನೇಮಕವಾಗುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದು ನಿಮ್ಮಿಂದ ನನಗೆ ಬಂದಿರೋ ಮಾಹಿತಿ, ಇದರ ಬಗ್ಗೆ ವರಿಷ್ಠರಿಂದ ನನಗೇನೂ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ದೆಹಲಿಗೆ ಹೋದ ಮೇಲೆ ಚರ್ಚೆ ಮಾಡುತ್ತೇನೆ, ಹೊಸದಾಗಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ತಮಗೇನು ತಿಳಿದಿಲ್ಲ, ಇದು ಮಾಧ್ಯಮಗಳಿಂದ ತಿಳಿದುಬಂದಿರುವ ವಿಚಾರ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ತೆರಳಿದ ನಂತರ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಂದಿನ ವಾರ ಡಿಸಿ ಮತ್ತು ಸಿಇಓ ಗಳ ಜೊತೆ ಸಭೆ ನಡೆಸುತ್ತೇನೆ, ವಿವಿಧ ಇಲಾಖೆಗಳು ಅಭಿವೃದ್ಧಿ, ಅನುಷ್ಠಾನದ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಬಜೆಟ್ ನಲ್ಲಿ ಘೋಷಣೆ ಆಗಿರುವ ಯೋಜನೆಗಳ ಅನುಷ್ಠಾನಕ್ಕೆ ಯಾವ ರೀತಿಯಲ್ಲಾಗಿದೆ ಎನ್ನುವುದರ ಕುರಿತು ಸಭೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಬಜೆಟ್ ನಲ್ಲಿ ಘೊಷಣೆ ಆದ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಅಭಿವೃದ್ಧಿ ಕೆಲಸ ಮತ್ತು ಆಡಳಿತದಲ್ಲಿ ಚುರುಕು ಮುಟ್ಟಿಸುವ ಉದ್ದೇಶದಿಂದ ಡಿಸಿ ಮತ್ತು ಸಿಇಓಗಳ ಜೊತೆ ಮುಂದಿನ ವಾರ ಸಭೆ ನಡೆಸುತ್ತಿದ್ದೇನೆ ಎಂದು ವಿವರಿಸಿದರು.




