IF NECESSARY POLICE WILL GIVE NOTICE TO ESHWARAPPA: ಅಗತ್ಯ ಬಿದ್ದರೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೂ ನೋಟಿಸ್ ಜಾರಿ: ಗೃಹಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಅಗತ್ಯ ಬಿದ್ದರೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೂ ನೋಟಿಸ್ ಪೊಲೀಸರು ನೀಡುತ್ತಾರೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು. ಈಗಾಗಲೇ ಉಡುಪಿ ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
ಈಶ್ವರಪ್ಪ ಅವರು ರಾಜೀನಾಮೆ ಕೊಟ್ಟರೂ ಅವರಿಗೆ ನೋಟಿಸ್ ನೀಡದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದರ‌ ಬಗ್ಗೆ ಪೊಲೀಸರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು, ನಾನು ಈಗ ಗೃಹ ಇಲಾಖೆಯಲ್ಲಿ ಎಕ್ಸ್ ಪರ್ಟ್ ಆಗಿದ್ದೇನೆ, ನನಗೆ ಈ ಖಾತೆ ಸಾಕು ಅನ್ನಿಸಿಲ್ಲ, ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.

ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ
ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಶ್ರವಣಬೆಳಗೊಳ ಕೇಸ್ ನಲ್ಲಿ ಮಾಜಿ ಸಚಿವರ ಆಪ್ತನ ಬಂಧನ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವರು ತಿಳಿಸಿದರು.

ಧ್ವನಿವರ್ಧಕ ಬಳಕೆ ಕುರಿತು ಸರ್ಕಾರದ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು, ಧ್ವನಿವರ್ಧಕಗಳ ಬಳಕೆಗೆ ಬೆಳಿಗ್ಗೆ ೬ ರಿಂದ‌ ರಾತ್ರಿ ೧೦ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ, ಆದರೆ ರಾತ್ರಿ ೧೦ ರಿಂದ ಬೆಳಿಗ್ಗೆ ೬ ಗಂಟೆವರೆಗೆ ಅವಕಾಶ ಇರೋದಿಲ್ಲ ಎಂದು ಸ್ಪಷ್ಟಪಡಿಸಿದರು.
ಒಂದು ವೇಳೆ‌ ನಿಯಮ ಉಲ್ಲಂಘನೆ ಮಾಡಿದರೆ, ಕಾನೂನು ರೀತಿಯ ಕ್ರಮಕೈಗೊಳ್ಳಲಾಗುವುದು, ಇನ್ನೂ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯವದವರು‌ ಕೂಡಲೇ ಅನುಮತಿ ಪಡೆಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

More News