PM in quad summit: ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ: ಜಪಾನ್ ತಲುಪಿದ ಪ್ರಧಾನಿ

ಟೋಕಿಯೋ : ಮಹತ್ವದ ಕ್ವಾಡ್ ಶೃಂಗ ಸಭೆಯಲ್ಲಿ ಭಾಗವಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಜಪಾನ್ ತಲುಪಿದರು. ಎರಡು ದಿನಗಳ ಜಪಾನ್ ಪ್ರವಾಸದಲ್ಲಿ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜಪಾನ್ ಗೆ ತೆರಳಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಟೋಕಿಯೋಗೆ ಬಂದು ಇಳಿದಿದ್ದೇನೆ, ಕ್ವಾಡ್ ಶೃಂಗ ಸಭೆ ಮತ್ತು ಇನ್ನಿತರ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ, ಜಪಾನ್ ಉದ್ಯಮಿಗಳ ಜತೆ ಮತ್ತು ಭಾರತೀಯ ಸಮುದಾಯದವರ ಜತೆ ಸಂವಾದ ನಡೆಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಎಂಟು ವರ್ಷಗಳಲ್ಲಿ ಐದನೇ ಬಾರಿಗೆ ಜಪಾನ್ ದೇಶಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಶೃಂಗ ಸಭೆಯಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ, ಆಸ್ಟ್ರೇಲಿಯಾದ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

More News