ಬೆಂಗಳೂರು : ರೈತ ಮುಖಂಡ ಟಿಕಾಯಿತ್ ಮೇಲೆ ಪತ್ರಕರ್ತರ ಸೋಗಿನಲ್ಲಿ ಹೋಗಿ ಮಸಿ ಬಳಿದಿದ್ದಾರೆ, ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ ಅವರು, ವಶಕ್ಕೆ ಪಡೆದವರು ಯಾವ ಪಕ್ಷದವರಾದರೆ ಏನಂತೆ? ಕರ್ನಾಟಕದಲ್ಲಿ ಇಂಥ ಘಟನೆಗಳು ಆಗಬಾರದು ಎಂದು ಹೇಳಿದರು.

ಇನ್ನೊಂದು ವರ್ಷದಲ್ಲಿ ಚುನಾವಣೆ ಬರುತ್ತಿದೆ, ಆದ್ದರಿಂದ ಡಿಕೆಶಿವಕುಮಾರ್ ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಇಂಥ ಮಾತುಗಳನ್ನು ಹೇಳಿ ಕಾಂಗ್ರೆಸ್ ಪಕ್ಷ ದೇಶದಿಂದಲೇ ದೂರವಾಗುತ್ತಿದೆ ಎಂದು ದೂರಿದರು. ಕರ್ನಾಟಕದಲ್ಲಿ ಇಂಥ ಕೆಲಸಗಳು ನಡೆಯಬಾರದು, ಹಲ್ಲೆ ಮಾಡಿದವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.




