ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಎಂಬ ಹೆಗ್ಗಳಿಕೆ ಪಡೆದುಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಭಾರೀ ಪ್ರಮಾಣದ ಅಕ್ರಮ ನಡೆದಿದೆ ಎಂದು ಬಿಜೆಪಿಯ ಹಿರಿಯ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿ ಆರೋಪಿಸಿದ್ದಾರೆ.
ಗುಪ್ತಚರ ಸಂಸ್ಥೆಗಳಿಂದ ಟಾಟ ಐಪಿಲ್ ನಲ್ಲಿ ಭಾರೀ ಪ್ರಮಾಣದ ಕಳ್ಳಾಟ ನಡೆದಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಕೇಂದ್ರದ ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐನ ಸರ್ವಾಧಿಕಾರಿಯಾಗಿದ್ದಾರೆ. ಆದ್ದರಿಂದ ಈ ಬಗ್ಗೆ ಸರ್ಕಾರ ತನಿಖೆ ನಡೆಸುವುದು ಅನುಮಾನವಾಗಿದೆ. ಹಾಗಾಗಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸುವ ಅವಶ್ಯಕತೆ ಬರಬಹುದು ಎಂದು ಹೇಳಿದ್ದಾರೆ.
ಮೇ 29 ರಂದು ಟಾಟಾ ಐಪಿಎಲ್ ನ ಗುಜರಾತ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ರಾಜಾಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆದ್ದು ಟಾಟಾ ಐಪಿಎಲ್ ಕಪ್ ತನ್ನದಾಗಿಸಿಕೊಂಡಿತ್ತು.

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ರಾಯಲ್ಸ್ ತಂಡದ ಕಪ್ತಾನ ಸಂಜು ಸ್ಯಾಮ್ಸನ್ ನಿರ್ಧಾರ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಏಕೆಂದರೆ ಟೈಟಾನ್ಸ್ ರನ್ ಚೇಸಿಂಗ್ ನಲ್ಲಿ ಈ ಬಾರಿ ಕಿಂಗ್ ಆಗಿತ್ತು. ಇದನ್ನು ತಿಳಿದು ಅವರ ನಿರ್ಧಾರ ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಸುಬ್ರಮಣಿಯನ್ ಸ್ವಾಮಿ ಅವರ ಟ್ವೀಟ್ ಮತ್ತಷ್ಟು ಕುತೂಹಲ ಕೆರಳಿಸಿದೆ. ಈ ಎಲ್ಲಾ ಅನುಮಾನಗಳಿಗೆ ಸೂಕ್ತ ತನಿಖೆಯೇ ಉತ್ತರ ನೀಡಬೇಕಾಗಿದೆ.
#subramanianswamy
#amitshah
#jaishah
#bcci
#gujarathtitans
#rajasthanroyals