ನೈಜಿರಿಯಾ: ಚರ್ಚ್ ನಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಸಂದರ್ಭದಲ್ಲಿ ಬಂದೂಕು ಧಾರಿಗಳು ನುಗ್ಗಿ ಏಕಾಏಕಿ ದಾಳಿ ನಡೆಸಿ 50ಕ್ಕೂ ಹೆಚ್ಚು ಭಕ್ತರನ್ನು ಧಾರುಣವಾಗಿ ಹತ್ಯೆಗೈದಿರುವ ಘಟನೆ ನೈಜೀರಿಯಾ ಕ್ಯಾಥೋಲಿಕ್ ಚರ್ಚ್ ಆವರಣದಲ್ಲಿ ನಡೆದಿದೆ.
ನೈಜಿರಿಯಾದ ಒಂಡೋ ರಾಜ್ಯದ ಸೇಂಟ್ ಫ್ರಾನ್ಸಿಸ್ ಕ್ಯಾಥೋಲಿಕ್ ಚರ್ಚ್ ನಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪೂಜೆಗಾಗಿ ಸೇರಿದ್ದರು. ಈ ವೇಳೆ ಏಕಾಏಕಿ ಬಂದೂಕುಧಾರಿಗಳು ಚರ್ಚ್ ನ ಆವರಣದೊಳಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದರಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 50 ಕ್ಕೂ ಹೆಚ್ಚು ಜನರು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

ಇದೊಂದು ಮಹಾನ್ ದೊಡ್ಡ ಹತ್ಯಾಕಾಂಡ ಇಂತಹ ದುರ್ಘಟನೆಗಳು ಮರುಕಳಿಸಬಾರದು ಎಂದು ಒಂಡೋ ರಾಜ್ಯದ ರಾಜ್ಯಪಾಲರು ತಿಳಿಸಿದ್ದಾರೆ. ದಾಳಿಕೋರರ ಉದ್ದೇಶ ಮತ್ತು ಗುರುತು ಪತ್ತೆಯಾಗಿಲ್ಲ ಎಂದು ತಿಳಿಸಿದ ಪೊಲೀಸ್ ಅಧಿಕಾರಿಗಳು, ಘಟನೆಗೆ ನಿಖರ ಕಾರಣನೂ ತಿಳಿದುಬಂದಿಲ್ಲ ಎಂದು ತಿಳಿಸಿದ್ದಾರೆ.




