SLOW INCREASE OF CORONA IN STATE: ರಾಜ್ಯದಲ್ಲಿ ನಿಧಾನಗತಿಯಲ್ಲಿ ಏರಿಕೆ ಕಾಣುತ್ತಿರುವ ಕೊರೊನಾ: ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಪ್ರತಿನಿತ್ಯ ಕೊವಿಡ್ – 19 ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆಯೇ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ.
ಕಳೆದ ಹತ್ತು ದಿನಗಳಲ್ಲಿ ಕೋರೋನಾ ಸೋಂಕು ನಿಧಾನಗತಿಯಲ್ಲಿ ಏರಿಕೆ ಕಾಣುತ್ತಿದ್ದು, ನಿನ್ನೆ ಒಂದೇ ದಿನ 471 ಪ್ರಕರಣಗಳು ಹಾಗೂ ಪಾಸಿಟೀವ್ ಪ್ರಕರಣ 2.14% ಏರಿಕೆಯಾಗಿದೆ.
ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಮಾರ್ಸೆಲ್ ಮತ್ತು ಪೊಲೀಸ್ ಸಿಬ್ಬಂದಿಯ ಸಹಾಯ ಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಶಾಪಿಂಗ್ ಮಾಲ್, ರೆಸ್ಟೋರೆಂಟ್, ಪಬ್, ಹೋಟೇಲ್ ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್ ಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಸ್ವಂತ ಮತ್ತು ಸಾರ್ವಜನಿಕ ವಾಹನಗಳಲ್ಲಿ ಪ್ರಯಾಣದ ಸಂದರ್ಭದಲ್ಲೂ ಕಡ್ಡಾಯವಾಗಿ ಮಾಸ್ಕ ಧರಿಸಲು ಸೂಚನೆ ನೀಡಲಾಗಿದೆ. ಲಸಿಕೆಯನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು ಮತ್ತು ಸಿರಿ ಲಕ್ಷಣಗಳಿರುವವರು ತಪ್ಪದೇ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ ರಂದೀಪ್ ಅವರು ಹೊರಡಿಸಿರುವ ಆದೇಶದಲ್ಲಿ ಸೂಚಿಸಿದೆ.

#stategovernment, #educationinstitution, #corona, #covid19, #hostel, #office, #shoppingmall, #pub, #hotel

More News