ಮೈಸೂರು : ಜೆಡಿಎಸ್ ಹಿರಿಯ ಶಾಸಕ ಜಿ ಟಿ ದೇವೇಗೌಡ ಅವರು ಇಂದು ಮೈಸೂರಿನಲ್ಲಿ ಬಿಜೆಪಿ ನಾಯಕರು ಮತ್ತು ಸಚಿವರೊಂದಿಗೆ ಕಾಣಿಸಿಕೊಂಡು ನೆರೆದಿದ್ದವರಿಗೆ ಅಚ್ಚರಿ ಮೂಡಿಸಿದರು.
ಕ್ರಾಫರ್ಡ್ ಹಾಲ್ ಎದುರಿನ ಓವಲ್ ಗ್ರೌಂಡ್ ನಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳುವ ಸಂದರ್ಭದಲ್ಲಿ ಅವರು ಉಪಸ್ಥಿತರಿದ್ದರು. ಪ್ರಧಾನಿ ಅವರನ್ನು ಬರಮಾಡಿಕೊಂಡಿರುವುದು ಜಿ ಟಿ ದೇವೇಗೌಡರ ಮುಂದಿನ ಹೆಜ್ಜೆಯ ಬಗ್ಗೆ ಅನುಮಾನಗಳು ಸಾರ್ವಜನಿಕರಲ್ಲಿ ಮೂಡಿದೆ.
ಜೆಡಿಎಸ್ ಪಕ್ಷದಿಂದ ಸಾಕಷ್ಟು ಅಂತರ ಕಾಯ್ದುಕೊಂಡಿರುವ ಅವರು, ಬಿಜೆಪಿ ಸಖ್ಯ ಬೆಳೆಸಿರುವುದು ಈ ಅನುಮಾನಗಳಿಗೆ ಕಾರಣವಾಗಿದೆ. ಈ ಹಿಂದೆ ಅವರು ಕಾಂಗ್ರೆಸ್ ಬಾಗಿಲನ್ನು ತಟ್ಟಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ತಮಗೆ ಹಾಗೂ ತಮ್ಮ ಪುತ್ರನಿಗೆ ಮೈಸೂರಿನಿಂದ ಟಿಕೇಟ್ ಕೇಳಿದ್ದರು. ಆದರೆ, ಈ ಸಂಬಂಧ ಕಾಂಗ್ರೆಸ್ ನಿಂದ ಸೂಕ್ತ ರೀತಿಯ ಸ್ಪಂದನೆ ಸಿಗದೇ ಇದ್ದುದ್ದರಿಂದ ಅವರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ ಎಂದು ತಿಳಿದುಬಂದಿದೆ.
#gtdevegowda, #bjpleaders, #crowfordhall, #mysoreuniversity, #Ovelground, #congress, #jds,




