TRIPURA CM WINS: ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾಗೆ ಗೆಲುವು : ನಾಲ್ಕು ಸ್ಥಾನಗಳಲ್ಲಿ ಬಿಜೆಪಿಗೆ ಮೂರು, ಕಾಂಗ್ರೆಸ್ 1 ಸ್ಥಾನ

ಅಗರ್ತಲಾ : ತ್ರಿಪುರಾದ ಬರ್ದೊವಾಲಿ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಯಗಳಿಸುವುದರ ಮೂಲಕ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಮಾಣಿಕ್ ಸಾಹಾ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿಯನ್ನು ಆರು ಸಾವಿರ ಮತಗಳ ಅಂತರದಿಂದ ಸೋಲಿಸುವ ಮೂಲಕ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಬಿಜೆಪಿಯಿಂದ ಮುಖ್ಯಮಂತ್ರಿಯಾಗಿದ್ದ ಇವರಿಗೆ ಗೆಲುವು ಅನಿವಾರ್ಯವಾಗಿತ್ತು.
ಅಗರ್ತಲಾ, ಬರ್ದೊವಾಲಿ, ಸುರ್ಮಾ ಮತ್ತು ಜುಬಾರಾಜ್ ನಗರ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ ಮೂರು ಸ್ಥಾನಗಳನ್ನು ಬಿಜೆಪಿ ಹಾಗೂ ಒಂದು ಸ್ಥಾನವನ್ನು ಕಾಂಗ್ರೆಸ್ ಗೆಲುವು ಕಂಡಿದೆ.

ರಾಜ್ಯಸಭಾ ಸದಸ್ಯರಾಗಿದ್ದ ಮಾಣಿಕ್ ಸಾಹಾ, ಅವರು ಕಳೆದ ತಿಂಗಳು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಈ ಹಿಂದಿನ ಮುಖ್ಯಮಂತ್ರಿ ವಿಪ್ಲವ್ ದೇವ್ ಅವರು ದಿಢೀರ್ ರಾಜಿನಾಮೆ ಸಲ್ಲಿಸಿದ್ದರಿಂದ ಆ ಸ್ಥಾನಕ್ಕೆ ನೇಮಗೊಂಡಿದ್ದರು. ಆದ್ದರಿಂದ ಸಾಹಾ ಅವರಿಗೆ ಈ ಗೆಲುವು ಅನಿವಾರ್ಯವಾಗಿತ್ತು.

#manikshah, #viplavdev, #cm, #tripura, #bjp

More News