ಮುಂಬೈ: ಫೆಮಿನಾ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯಲ್ಲಿ ಕರ್ನಾಟಕ ಮೂಲದ ಸಿನಿ ಶೆಟ್ಟಿ ಮಿಸ್ ಇಂಡಿಯಾ 2022 ವರ್ಷದ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
58 ನೇ ಫೆಮಿನಾ ಮಿಸ್ ಇಂಡಿಯಾದಲ್ಲಿ 21 ವರ್ಷ ವಯಸ್ಸಿನ ಸಿನಿ ಈ ಸಾಧನೆ ಮಾಡಿದ್ದು, ಮುಂದಿನ ವರ್ಷ ನಡೆಯುವ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಅವರು ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ. ರಾಜಸ್ಥಾನದ ರುಬಲ್ ಶೆಖಾವತ್ ಹಾಗೂ ಉತ್ತರ ಪ್ರದೇಶದ ಶಿನಾತಾ ಚೌಹಾಣ್ 1ನೇ ಹಾಗೂ 2ನೇ ರನ್ನರ್ ಅಪ್ ಸ್ಥಾನ ಪಡೆದರು.
2020 ರ ಮಿಸ್ ಇಂಡಿಯಾ ಮಾನಸಾ ವಾರಣಾಸಿ ಅವರು ಸಿನಿ ಶೆಟ್ಟಿ ಅವರಿಗೆ ಕಿರೀಟವಿರಿಸಿ ಗೌರವಿಸಿದರು. ಮುಂಬೈನಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಸಿನಿ ಅವರು ಅವರು ಈ ಗೌರವಕ್ಕೆ ಪಾತ್ರರಾದರು. ಕಾಂತಿಯುತ ಹಾಗೂ ಮೋಡಿ ಮಾಡುವ ಸೌಂದರ್ಯವನ್ನು ಹೊಂದಿದ್ದ ಸಿನಿ ಶೆಟ್ಟಿ ಅವರು ನಮ್ಮ ಹೃದಯ ಗೆದ್ದಿದ್ದಾರೆ.
ಮುಂಬರುವ ದಿನಗಳಲ್ಲಿ ವಿಶ್ವ ಸುಂದರಿ ವೇದಿಕೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸುವುದನ್ನು ನಾವು ಕಾತುರದಿಂದ ಎದುರು ನೋಡುತ್ತಿದ್ದೇವೆ ಎಂದು ಮಿಸ್ ಇಂಡಿಯಾ ಅಧಿಕೃತ ಖಾತೆಯಲ್ಲಿ ಬರೆಯಲಾಗಿದೆ.
ದಕ್ಷಿಣ ಕನ್ನಡ ಮೂಲದ ಸಿನಿ ಶೆಟ್ಟಿ
ದಕ್ಷಿಣ ಕನ್ನಡ ಮೂಲದ 21 ವರ್ಷದ ಸಿನಿ, ಮುಂಬೈನಲ್ಲಿ ಹುಟ್ಟಿಬೆಳೆದವರು. ಭರತನಾಟ್ಯ ಕಲಾವಿದೆಯಾಗಿದ್ದಾರೆ. ಆದರೆ, ಸಿನಿ ಶೆಟ್ಟಿ ಮುಂಬೈನಲ್ಲಿ ಜನಿಸಿದರು. ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ ವೃತ್ತಿಪರ ಕೋರ್ಸ್ ಮಾಡುತ್ತಿದ್ದಾರೆ. ಹೀಗಿದ್ದರೂ ಅವರಿಗೆ ನೃತ್ಯ ಎಂದರೆ ಬಹಳ ಅಚ್ಚುಮೆಚ್ಚು. ಅವರು ನಾಲ್ಕನೇ ವಯಸ್ಸಿನಲ್ಲಿ ನೃತ್ಯ ಮಾಡಲು ಪ್ರಾರಂಭಿಸಿದ್ದು, ಹದಿನಾಲ್ಕು ವರ್ಷದವರಿದ್ದಾಗ ತನ್ನ ಅರಂಗೇತ್ರಂ ಮತ್ತು ಭರತನಾಟ್ಯವನ್ನು ಪೂರ್ಣಗೊಳಿಸಿದರು.
ಇನ್ನು ಮಿಸ್ ಇಂಡಿಯಾ 2022 ರನ್ನರ್ ಅಪ್ ರುಬಲ್ ಶೇಖಾವತ್ ನೃತ್ಯ, ನಟನೆ, ಚಿತ್ರಕಲೆಯಂತಹ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದಾರೆ ಮತ್ತು ಬ್ಯಾಡ್ಮಿಂಟನ್ ಇಷ್ಟಪಡುತ್ತಾರೆ. ಮಿಸ್ ಇಂಡಿಯಾ 2022 ರ ಎರಡನೇ ರನ್ನರ್ ಅಪ್ ಶಿನಾತಾ ಚೌಹಾಣ್ ಒಬ್ಬ ವಿದ್ವಾಂಸರಾಗಿದ್ದಾರೆ ಮತ್ತು ಯಾವಾಗಲೂ ನಾಯಕತ್ವದ ಪಾತ್ರಗಳನ್ನು ವಹಿಸಿಕೊಂಡಿದ್ದಾರೆ.
#sini shetty, #missindia2022, #feminamissindia2022, #rubel shekhawath, #sinathachowhan, #runnersup, #crown, #mumbai




