ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ACB ಅಧಿಕಾರಿಗಳು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಶಾಕ್ ನೀಡಿದ್ದಾರೆ. ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು 40ಕ್ಕೂ ಹೆಚ್ಚು ಅಧಿಕಾರಿಗಳು ಒಟ್ಟು ಐದು ಕಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕಂಟೋನ್ಮಂಟ್ ರೈಲ್ವೆ ನಿಲ್ದಾಣದ ಬಳಿ ಇರುವ ಜಮೀರ್ ಅಹ್ಮದ್ ಖಾನ್ ಅವರ ಮನೆ, ಅವರ ಸಿಲ್ವರ್ ಓಕ್ ನಲ್ಲಿರುವ ಪ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.


#zameer ahmed khan, #mla, #acb raid, #contonement, #national travels, #gk associates, #ed, #documents veification




