ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ ನ ಸಂಗಮ್ ನಲ್ಲಿ ಒಂದೇ ಶಾಲೆಯ ಅಪ್ರಾಪ್ತ ವಿದ್ಯಾರ್ಥಿಗಳು ಪರಸ್ಪರ ಬಾಂಬ್ ಎಸೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಗಮ್ ನಲ್ಲಿ ವಿದ್ಯಾರ್ಥಿಗಳ ಒಂದು ಗುಂಪು ಹುಟ್ಟು ಹಬ್ಬ ಆಚರಣೆಯಲ್ಲಿತ್ತು. ಇದೇ ಸಂದರ್ಭದಲ್ಲಿ ಮತ್ತೊಂದು ಅದೇ ಶಾಲೆಯ ವಿದ್ಯಾರ್ಥಿಗಳ ಗುಂಪು ಅಲ್ಲಿಗೆ ಆಗಮಿಸಿತ್ತು. ಮಾತಿನ ಚಕಮಕಿ ನಡೆದು ಹೊಡೆದಾಟ ನಡೆದಿತ್ತು. ಈ ಸಂದರ್ಭದಲ್ಲಿ ಒಂದು ಗುಂಪು ಬಾಂಬ್ ಅನ್ನು ಎಸೆದರೆ, ಇನ್ನೊಂದು ಗುಂಪು ವಾಪಾಸ್ಸು ಬಾಂಬ್ ಎಸೆದಿದೆ. ಇದರಿಂದ ಮೂವರು ಗಾಯಗೊಂಡಿದ್ದಾರೆ ಎಂದು ಎಸ್ವಿ ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಸಂಬಂಧ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಉಭಯ ಗುಂಪುಗಳ ವಿದ್ಯಾರ್ಥಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
#uther pradesh, #bomb thrown, #stdents, #same school, #birthday celebration




