ನವದೆಹಲಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯ ಸಭೆಗೆ ನಾಮನಿರ್ದೇಶನ ಮಾಡಿದೆ.
ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳ ಧರ್ಮಾಧಿಕಾರಿ ಸೇರಿದಂತೆ ನಾಲ್ವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವಿರೇಂದ್ರ ಹೆಗ್ಗಡೆ ಅವರ ಜತೆಗೆ ಸಂಗೀತ ಮಾಂತ್ರಿಕ ಇಳಯರಾಜ, ಚಿತ್ರ ನಿರ್ದೇಶಕ ರಾಜಮೌಳಿ ಅವರ ತಂದೆ ಕೆ ವಿ ವಿಜಯೇಂದ್ರ ಪ್ರಸಾದ್ ಹಾಗೂ ಪಿ ಟಿ ಉಷಾ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ರಾಜ್ಯಸಭೆಗೆ ಡಾ. ಡಿ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ
ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. pic.twitter.com/KwoNdZyW6Z
— Narendra Modi (@narendramodi) July 6, 2022
ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳ ಹಾಗೂ ಆಯಾಮಗಳಲ್ಲಿ ಜನಜೀವನದಲ್ಲಿ ಸಕಾರಾತ್ಮಕ ಬೆಳವಣಿಗೆಗೆ ಶ್ರಮಿಸುತ್ತಿರುವ ಶ್ರೀ ಹೆಗ್ಗಡೆಯವರ ಅನುಭವ ಸಂಸತ್ತಿನ ಕಲಾಪಗಳ ಸತ್ವ ಹೆಚ್ಚಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
தலைமுறைகளைக் கடந்து @ilaiyaraaja அவர்களின் அற்புத படைப்பாற்றல் மக்களை மகிழ்வித்து வருகிறது. அவரது இசைப் படைப்புகள் பல்வேறு உணர்வுகளை அழகாக வெளிப்படுத்துவன. pic.twitter.com/qgV1ZlK9lP
— Narendra Modi (@narendramodi) July 6, 2022
ರಾಜ್ಯಸಭೆಗೆ ನಾಮನಿರ್ದೇಶನಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಂಥ ಅರ್ಹರನ್ನು ಶಿಫಾರಸು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

ಅವರೊಂದಿಗೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಒಲಿಂಪಿಯನ್ ಅಥ್ಲೀಟ್ ಆಗಿದ್ದ ಪಿ. ಟಿ. ಉಷಾ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ಖ್ಯಾತ ಚಿತ್ರ ನಿರ್ದೇಶಕ, ಚಿತ್ರ ಸಾಹಿತಿ ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನೂ ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.
#cmbasavaraj bommai, #pmnarendra modi, #rajya sabhe, #nominated, #p t usha, #dhramasthala dharmadhikari, #dr veerendra heggade, #illeyaraja, #k v vijendra prasad




