AGUMBE GHAT: ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್ : ಗೃಹ ಸಚಿವರಿಂದ ವೀಕ್ಷಣೆ

ಆಗುಂಬೆ : ಮಲೆನಾಡು ಮತ್ತು ಕರಾವಳಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಮತ್ತು ಘಾಟ್ ನ 11 ಮತ್ತು 12 ನೇ ತಿರುವಿನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹಾಗೆಯೇ ಬದಲಿ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ.
ಘಾಟ್ ನ ನಾಲ್ಕನೇ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿತವಾಗಿದ್ದು, ರಸ್ತೆಗೆ ಅಡ್ಡವಾಗಿ ಮರಗಳು ಬಿದ್ದಿವೆ. ಮಣ್ಣು ತೆರವು ಕಾರ್ಯ ಆರಂಭವಾಗಿದೆ. ಆದರೆ ನಿರಂತರ ಸುರಿಯುತ್ತಿರುವ ಮಳೆ ತೆರವು ಕಾರ್ಯಕ್ಕೆ ಅಡ್ಡಿಯನ್ನುಂಟು ಮಾಡಿದೆ.

ಹಲವು ದಿನಗಳಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಂಬೆ ಘಾಟ್ ನಲ್ಲಿ ಗುಡ್ಡ ಕುಸಿತವಾಗಿದೆ. ಆದ್ದರಿಂದ ಉಡುಪಿ ಜಿಲ್ಲೆಗೆ ಸಂಪರ್ಕಿಸುವ ರಸ್ತೆಯಲ್ಲಿ ಸಂಪೂರ್ಣವಾಗಿ ಸಂಚಾರ ಬಂದ್ ಆಗಿದೆ.

ಹಾಗೆಯೇ ಘಾಟ್ ನ 11 ಮತ್ತು 12 ತಿರುವಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇದನ್ನು ಕೂಡಲೇ ಸರಿಪಡಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

ಮಣ್ಣು ಕುಸಿತ ಪ್ರದೇಶಕ್ಕೆ ಸಚಿವರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರಲ್ಲದೆ, ಕೂಡಲೇ ತೆರವು ಕಾರ್ಯ ಮುಗಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಸೂಚನೆ ನೀಡಿದರು.

#agumbe ghat, #hill collapse, #udupi road, #home minister, #aaraga gnanedra, #road block, #alternative road, #karavali, #malenadu

More News